ಕಾರ್ಕಳ : ವಿಶ್ವಬ್ರಾಹ್ಮಣ ಸಮಾಜೋದ್ಧಾರ ಸಭಾ ವತಿಯಿಂದ ಸೆ. 17ರಂದು ಪೆರ್ವಾಜೆ ವಿಶ್ವಕರ್ಮ ಸಮಾಜ ಭವನದಲ್ಲಿ ಶ್ರೀ ವಿಶ್ವಕರ್ಮ ವ್ರತ ಹಾಗೂ ಹೋಮ ಜರುಗಲಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ವ್ರತಾರಂಭ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಂತರ್ಪಣೆ, ಸಂಜೆ 6 ಗಂಟೆಗೆ ಕಾರ್ಕಳ ಶ್ರೀ ಕಾಳಿಕಾಂಬಾ ಭಜನಾ ಸೇವಾ ಸಮಿತಿ ಹಾಗೂ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ 7.30ಕ್ಕೆ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿ.ಬಿ.ಎಸ್. ಸಭಾದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಸೆ. 17 : ಶ್ರೀ ವಿಶ್ವಕರ್ಮ ವ್ರತ ಹಾಗೂ ಹೋಮ
