ಕಾರ್ಕಳ : ಹೊಸ್ಮಾರಿನಲ್ಲಿ ಬುಧವಾರ ಸ್ಕೂಟರ್ ಸ್ಕಿಡ್ ಆಗಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಪ್ರಜ್ವಲ್ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಪ್ರಜ್ವಲ್ ಚಲಾಯಿಸುತ್ತಿದ್ದ ಸ್ಕೂಟರ್ ಹೊಸ್ಮಾರು ತಿರುವಿನಲ್ಲಿ ಸ್ಕಿಡ್ ಆಗಿ ಒಂದಷ್ಟು ದೂರ ಜಾರಿಕೊಂಡು ಹೋಗಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ರಿಕ್ಷಾ ಪಲ್ಟಿಯಾಗಿದೆ. ರಿಕ್ಷಾದಲ್ಲಿದ್ದ ಪ್ರಯಾಣಿಕ ನಾರಾವಿಯ ಅಜ್ಜಾದೆಮನೆ ಸುನಿಲ್ (30) ಎಂಬವರ ಕಾಲಿಗೆ ಗಾಯವಾಗಿದೆ. ಪ್ರಜ್ವಲ್‌ನನ್ನು ಕಾರ್ಕಳ ಗಾಜ್ರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಯುವಕ ಕೊನೆಯುಸಿರೆಳೆದಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಕೂಟರ್ ಸ್ಕಿಡ್ ಆಗಿ ರಿಕ್ಷಾಕ್ಕೆ ಡಿಕ್ಕಿ : ಸವಾರ ಸಾವು
