ಕಾರ್ಕಳ ಸೇರಿ 195 ತಾಲೂಕು ಬರಪೀಡಿತ – ಸರಕಾರ ಘೋಷಣೆ

ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟ ಕಾರಣ ರಾಜ್ಯಕ್ಕೆ ಬರ ಆವರಿಸಿಕೊಂಡಿದ್ದು, ಸರಕಾರ ಇಂದು ಕಾರ್ಕಳವೂ ಸೇರಿ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಮತ್ತು ಮೂಡುಬಿದಿರೆ, ಉಡುಪಿ ಜಿಲ್ಲೆಯಲ್ಲಿ ಬ್ರಹ್ಮಾವರ ತಾಲುಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಕಾರ್ಕಳ ತೀವ್ರ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿದೆ.

ಈ ಎಲ್ಲ ತಾಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಂಡ ನಂತರ 161 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಿಸಲಾಗಿದೆ. ಸಂಬಂಧ ಪಟ್ಟ ಜಿಲ್ಲಾಧಿಕಾರಿಗಳು ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ತೀವ್ರ ಬರಪೀಡಿತ 161 ತಾಲ್ಲೂಕುಗಳ ಪಟ್ಟಿ ಇಂತಿದೆ:
ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಪೂರ್ವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಹಾರೋಹಳ್ಳಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲಕೆರೆ, ಹೊಸದುರ್ಗ, ಮೊಳಕಾಲ್ಮೂರು, ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ, ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ, ಹುಣಸೂರು, ಮೈಸೂರು, ನಂಜನಗೂಡು, ಪಿರಿಯಾ ಪಟ್ಟಣ, ಟಿ. ನರಸೀಪುರ, ಸರಗೂರು, ಸಾಲಿಗ್ರಾಮ, ಮಂಡ್ಯ ಜಿಲ್ಲೆಯ ಕೆಆರ್ ಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡಪುರ, ಶ್ರೀರಂಗಪಟ್ಟಣ, ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಸಂಡೂರು, ಶಿರುಗುಪ್ಪ, ಕುರುಗೋಡು, ಕಂಪ್ಲಿ, ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕರಟಗಿ, ಕುಕನೂರು, ಕನಕಗಿರಿ, ರಾಯಚೂರು ಜಿಲ್ಲೆಯ ಲಿಂಗಸುಗೂರು, ಮಾನ್ವಿ, ರಾಯಚೂರು ಶಿರವಾರ.error: Content is protected !!
Scroll to Top