ರೋಹಿಣೆ ಸಿಂಧೂರಿಗೆ 6 ತಿಂಗಳ ಬಳಿಕ ಹುದ್ದೆ ನಿಯೋಜಿಸಿದ ಸರಕಾರ

ಬೆಂಗಳೂರು : ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಜತೆಗಿನ ವಿವಾದದ ಆರು ತಿಂಗಳ ಬಳಿಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರಕಾರ ಹುದ್ದೆ ನಿಯೋಜನೆ ಮಾಡಿದೆ. ಸದ್ಯ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಗೆಜೆಟಿಯರ್‌ ಡಿಪಾರ್ಟ್‌ಮೆಂಟ್‌ನ ಮುಖ್ಯ ಸಂಪಾದಕರ ಹುದ್ದೆ ನಿಯೋಜಿಸಿದೆ.

ಬುಧವಾರ ರಾಜ್ಯದ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆಯಾಗಿದೆ. ಈ ವೇಳೆ ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್‌ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಸೂಚಿಸಲಾಗಿದೆ.

ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ.

error: Content is protected !!
Scroll to Top