ಚೈತ್ರಾ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಬಾಯಲ್ಲಿ ನೊರೆ ನೋಡಿ ಗಾಬರಿಯಾದ ಪೊಲೀಸರು

ಬೆಂಗಳೂರು : ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಏರುಪೇರಾಗಿದೆ. ಸಿಸಿಬಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದಿದ್ದಾರೆ.
ಸ್ಟ್ರೆಚರ್‌ನಲ್ಲಿ ಚೈತ್ರಾಳನ್ನು ಆಸ್ಪತ್ರೆ ಸಿಬ್ಬಂದಿ ಕರೆದೊಯ್ದಿದ್ದಾರೆ. ಚೈತ್ರಾ ಬಾಯಿಯಲ್ಲಿ ನೊರೆ ಬಂದಿದೆ ಎಂದು ತಿಳಿದು ಬಂದಿದೆ.
ಚೈತ್ರಾಗೆ ಫಿಟ್ಸ್‌ ಬಂದು ಬಾಯಿಯಲ್ಲಿ ನೊರೆ ಬಂದಿದೆ. ಹೀಗಾಗಿ ಸಿಸಿಬಿ ಪೊಲೀಸರು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.

error: Content is protected !!
Scroll to Top