ಕಾರ್ಕಳ : ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ನೇಹಾ (10ನೇ ತರಗತಿ) ದ್ವಿತೀಯ ಸ್ಥಾನ, ಡೇನಿಕಾ ಕುಂದರ್ ತೃತೀಯ ಸ್ಥಾನ ಹಾಗು ಸಾನ್ವಿ (7ನೇ ತರಗತಿ) ತೃತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ಶೆಟ್ಟಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ರಾಜ್ಯಮಟ್ಟದ ಕುಸ್ತಿ ಪಂದ್ಯಾಟ : ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಸಾಧನೆ
