ಕಾರ್ಕಳ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶುಕ್ರವಾರ ಕಾರ್ಕಳ ಆಡಳಿತ ಸೌಧ ಮುಂಭಾಗ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಶಾಸಕ, ಮಾಜಿ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು. ತಹಶೀಲ್ದಾರ್ ಅನಂತ ಶಂಕರ್ ಬಿ., ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಪುರಸಭಾ ಸದಸ್ಯ ಸೋಮನಾಥ್ ನಾಯ್ಕ್, ಸಮಾಜ ಕಲ್ಯಾಣ ಇಲಾಖಾಧಿಕಾರಿ, ಉಪನೋಂದಣಾಧಿಕಾರಿ ಮಾರುತಿ, ಉಪತಹಶೀಲ್ದಾರ್ ಗಳಾದ ಮಂಜುನಾಥ್ ನಾಯಕ್, ಹರಿಪ್ರಸಾದ್, ಲಕ್ಷ್ಮೀ, ಕಂದಾಯ ನಿರೀಕ್ಷಕರಾದ ಶಿವಪ್ರಸಾದ್, ರಿಯಾಜ್ ಮಹಮ್ಮದ್ ಹಾಗೂ ತಾಲೂಕಿನ ಎಲ್ಲ ಗ್ರಾಮ ಆಡಳಿತಾಧಿಕಾರಿ ಹಾಗೂ ಸರಕಾರಿ ಇಲಾಖಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಕಳ : ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಚಾಲನೆ
