ಯೋಗಾಸನ ಸ್ಪರ್ಧೆ : ಜ್ಞಾನಸುಧಾದ ಅನ್ವಿ ಎಚ್.‌ ಅಂಚನ್‌ ರಾಜ್ಯಮಟ್ಟಕ್ಕೆ

ಕಾರ್ಕಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸೆ. 15 ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅನ್ವಿ ಎಚ್‌. ಅಂಚನ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಮೂಲಕ ರಾಜ್ಯ ಮಟ್ಟದ ಮೈಸೂರು ದಸರಾ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅನ್ವಿ ಎಚ್‌. ಅಂಚನ್‌ ಕಾರ್ಕಳದ ಹರೀಶ್ ಹಾಗೂ ಶೋಭಾ ದಂಪತಿ ಪುತ್ರಿ.

ಸಾಧಕ ವಿದ್ಯಾರ್ಥಿನಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಸಂಸ್ಥೆಯ ಸಿ.ಇ.ಒ ದಿನೇಶ್. ಎಂ. ಕೊಡವೂರು, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಉಷಾ ರಾವ್ ಯು., ಸಹ ಮುಖ್ಯ ಶಿಕ್ಷಕಿ ವಾಣಿ ಕೆ. ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

error: Content is protected !!
Scroll to Top