ಪೊಲೀಸ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆ

ಮಂಗಳೂರು: ಪೊಲೀಸ್ ಸಿಬ್ಬಂದಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಪಿತಾನಿಯೋ ಬಳಿ ಗುರುವಾರ ಸಂಭವಿಸಿದೆ. ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ನಿವಾಸಿ ಮಹೇಶ್‌ ಸವದತ್ತಿ (31) ಆತ್ಮಹತ್ಯೆ ಮಾಡಿಕೊಂಡವರು. ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್‌ ಸಿಬಂದಿಯೊಂದಿಗೆ ವಾಸವಾಗಿದ್ದರು. ಅವರು 2019ರಲ್ಲಿ ಮಂಗಳೂರು ಸಂಚಾರಿ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ಆರಂಭಿಸಿದ್ದರು. ಗುರುವಾರ ಮಧ್ಯಾಹ್ನ ವೇಳೆ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಅವರ ಕುಟುಂಬ ಸದಸ್ಯರು ಆಗಮಿಸಿ ದೂರು ನೀಡಿದ ಅನಂತರ ಮಾಹಿತಿ ದೊರೆಯಬಹುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.









































































































































































error: Content is protected !!
Scroll to Top