ಮೂಲ್ಕಿ: ನಗರದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್‌ನ ಹಿಂಬದಿಸವಾರೆ ಯುವತಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಉಡುಪಿಯಿಂದ ಮಂಗಳೂರಿನತ್ತ ಹೋಗುತ್ತಿದ್ದ ಬೈಕ್‌ಗೆ ಕಾರ್ನಾಡಿನಿಂದ ಬಂದು ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
ಮುಡಿಪು ಸಮೀಪದ ಬಾಳೆಪುಣಿಯ ಮನ್ವಿತ್‌ರಾಜ್ ಶೆಟ್ಟಿ ಬೈಕ್‌ನಲ್ಲಿ ಬಾಕ್ರೆಬೈಲಿನ ಪ್ರೀತಿಕಾ ಶೆಟ್ಟಿ (21) ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಢಿಕ್ಕಿ ಹೊಡೆದ ರಭಸಕ್ಕೆ ಪ್ರೀತಿಕಾ ಬೈಕ್‌ನಿಂದ ಒಂದಷ್ಟು ದೂರಕ್ಕೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದರು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.
ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೈಕ್‌ಗೆ ಕಾರು ಡಿಕ್ಕಿ : ಯುವತಿ ಸಾವು
