ಮಂಗಳೂರು : ಮಂಗಳೂರು ಗುಪ್ತಚರ ವಿಭಾಗದ ಸಿಬ್ಬಂದಿ ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು. (45) ಶನಿವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ರಾಜೇಶ್ ಅವರು ಈ ಹಿಂದೆ ಸುರತ್ಕಲ್, ಪಣಂಬೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮಂಗಳೂರು : ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ
