ಗುಜರಾತ್‌ನ ಖೇಡಾದಲ್ಲಿ ಘಟನೆ ಬಳಿಕ ಉದ್ವಿಗ್ನ ಸ್ಥಿತಿ
ಅಹಮದಾಬಾದ್: ಗುಜರಾತ್‌ನ ಖೇಡಾದಲ್ಲಿ ಶುಕ್ರವಾರ ಶಿವನ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದ ಪರಿಣಾಮ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಪೊಲೀಸರ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಮೂವರು ಪೊಲೀಸರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ನಂತರ, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗು ಭದ್ರತೆ ವಹಿಸಲಾಗಿದೆ.
ಪ್ರತಿ ವರ್ಷ ಖೇಡಾ ಜಿಲ್ಲೆಯ ಶಿವ ದೇವಾಲಯದಿಂದ ವಿಜೃಂಭಣೆಯ ಮೆರವಣಿಗೆ ಮಾಡಲಾಗುತ್ತದೆ. ಈ ಬಾರಿ ಸಾವಿರಾರು ಭಕ್ತರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆ ತೀನ್‌ಬತ್ತಿ ಪ್ರದೇಶಕ್ಕೆ ತಲುಪುತ್ತಿದ್ದಂತೆಯೇ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದ ಘಟನೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಸೇರಿದಂತೆ ಸುಮಾರು ಆರು ಜನರು ಗಾಯಗೊಂಡಿದ್ದಾರೆ.
ಯಾವುದೇ ರೀತಿಯ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಪೊಲೀಸ್ ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳ ಖಾತೆಗಳ ಮೇಲೂ ಸೈಬರ್ ಪೊಲೀಸರು ನಿಗಾ ಇಟ್ಟಿದ್ದಾರೆ. ಪೊಲೀಸರು ಎರಡೂ ಸಮುದಾಯದ ಹಿರಿಯರೊಂದಿಗೆ ಮಾತನಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.