ಕಾರ್ಯಸೂಚಿ ಬಹಿರಂಗವಾಗದೆ ಕುತೂಹಲ ಕೆರಳಿಸಿರುವ ಅಧಿವೇಶನ
ಹೊಸದಿಲ್ಲಿ : ಸೋಮವಾರದಿಂದ ನಡೆಯಲಿರುವ ಐದು ದಿನಗಳ ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ನಡೆಯಲಿರುವ ಚರ್ಚೆ ಯಾವುದು ಎಂಬುದರ ಗುಟ್ಟನ್ನು ಕೇಂದ್ರ ಸರಕಾರ ಬಿಟ್ಟುಕೊಟ್ಟಿಲ್ಲ. ಕಾಂಗ್ರೆಸ್ ಅಧಿವೇಶನದಲ್ಲಿ ಸಿಡಿಯಬಹುದಾದ ಯಾವುದೇ ಮಸೂದೆ ಗ್ರೆನೇಡ್ ಎದುರಿಸಲು ನಾನವು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದೆ.ಈ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ತೀವ್ರ ಕುತೂಹಲ ಕೆರಳಿಸಿರುವಂತೆಯೇ, ಎಲ್ಲ ಪಕ್ಷಗಳಿಂದ ಅಭಿಪ್ರಾಯ, ಸಲಹೆಗಳನ್ನು ಪಡೆಯಲು ಇಂದು ಸಂಜೆ ಸರ್ವಪಕ್ಷ ನಾಯಕರೊಂದಿಗೆ ಸಭೆಯನ್ನು ಕರೆಯಲಾಗಿದೆ.
ಯಾವುದೇ ಸಂಭಾವ್ಯ ಹೊಸ ಶಾಸನದ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳದಿದ್ದರೂ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಂತಹ ಚುನಾಯಿತ ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ಕುರಿತು ಕೆಲವು ಚರ್ಚೆಗಳು ನಡೆದಿವೆ. ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಹೊಸ ಕಟ್ಟಡಕ್ಕೆ ಸಂಸತ್ತು ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ಸಂಸತ್ತಿನ ವಿವಿಧ ಇಲಾಖೆಯ ಸಿಬ್ಬಂದಿಗೆ ಸಿಬ್ಬಂದಿಗೆ ಹೊಸ ಡ್ರೆಸ್ ಕೋಡ್‌ಗೆ ಸರ್ಕಾರ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ. ಸಂಸತ್ ಸಿಬ್ಬಂದಿಯ ಹೊಸ ಡ್ರೆಸ್ ಕೋಡ್‌ನಲ್ಲಿ ಕಮಲ ಚಿಹ್ನೆ ಇರುವುದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದು ಬಿಜೆಪಿಯ ತೀರಾ ಸಣ್ಣತನದ ವರ್ತನೆಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಮುಂಗಾರು ಅಧಿವೇಶನ ಜುಲೈ-ಆಗಸ್ಟ್‌ನಲ್ಲಿ ನಡೆದರೆ ನವೆಂಬರ್-ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಬಜೆಟ್ ಅಧಿವೇಶನವು ಪ್ರತಿ ವರ್ಷ ಜನವರಿ ಅಂತ್ಯದಿಂದ ಪ್ರಾರಂಭವಾಗುತ್ತದೆ. ಎರಡು ಅವಧಿಗಳ ನಡುವಿನ ಅಂತರವು ಆರು ತಿಂಗಳಿಗಿಂತ ಹೆಚ್ಚಿರಬಾರದು. ಈಗಿನಂತೆ, ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಸಭಾಂಗಣದಿಂದ ಪ್ರಾರಂಭವಾಗುವ ಸಂಸತ್ತಿನ 75 ವರ್ಷಗಳ ಪಯಣದ ವಿಶೇಷ ಚರ್ಚೆಯನ್ನು ಸರ್ಕಾರ ತನ್ನ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಿದೆ.