ಇಂದು ಏಷ್ಯಾಕಪ್‌ ಫೈನಲ್‌ : ಭಾರತ-ಶ್ರೀಲಂಕಾ ಮುಖಾಮುಖಿ

ಟೀಂ ಇಂಡಿಯಾದ ಟ್ರೋಫಿ ಬರ ನೀಗಲಿ ಎಂದು ಹಾರೈಕೆ

ಕೊಲಂಬೊ : ಏಷ್ಯಾಕಪ್ ಟೂರ್ನಿಯ ಫೈನಲ್‌ ಹಣಾಹಣಿ ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದ್ದು. ಬಹುಕಾಲದಿಂದ ಪ್ರಮುಖ ಟ್ರೋಫಿಯನ್ನು ಗೆಲ್ಲದೆ ಕ್ರಿಕೆಟ್‌ ಅಭಿಮಾನಿಗಳನ್ನು ನಿರಾಶೆಗೆ ತಳ್ಳಿರುವ ಟೀಂ ಇಂಡಿಯಾ ಈ ಟೂರ್ನಿಯಲ್ಲಾದರೂ ಟ್ರೋಫಿ ಬರ ನೀಗಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ. ಸ್ಪರ್ಧೆಯಲ್ಲಿ ಉಭಯ ತಂಡಗಳು ಅಮೋಘ ಪ್ರದರ್ಶನ ನೀಡಿವೆ. ಸೂಪರ್ 4 ಸುತ್ತಿನಲ್ಲಿ ಭಾರತ ಮತ್ತು ಶ್ರೀಲಂಕಾ ಎರಡೂ ತಂಡಗಳು ಆಡಿದ 3 ಪಂದ್ಯಗಳಲ್ಲಿ 2ರಲ್ಲಿ ಗೆದ್ದಿವೆ. ಉಳಿದ 1 ಪಂದ್ಯದಲ್ಲಿ ಸೋತಿವೆ. ಟೀಂ ಇಂಡಿಯಾ, ಶ್ರೀಲಂಕಾವನ್ನು ಸೋಲಿಸಿ ಫೈನಲ್ ತಲುಪಿದರೆ, ಪಾಕಿಸ್ಥಾನವನ್ನು ಕೊನೆಯ ಎಸೆತದಲ್ಲಿ ಮಣಿಸಿದ ಶ್ರೀಲಂಕಾ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
ಫೈನಲ್ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಟಾಸ್ ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ಸದ್ಯ ವಾತಾವರಣ ತಿಳಿಯಾಗಿದ್ದು, ಮಳೆ ಅಡಚಣೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಪಂದ್ಯ ಸರಾಗವಾಗಿ ಸಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.































































































































































error: Content is protected !!
Scroll to Top