ಮೋದಿ ಹುಟ್ಟು ಹಬ್ಬ – ಸೇವಾ ಪಾಕ್ಷಿಕ ಅಭಿಯಾನದಡಿ ಕಾರ್ಕಳದಲ್ಲಿ ವಿವಿಧ ಕಾರ್ಯಕ್ರಮ

ಕಾರ್ಕಳ : ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನುಮ ದಿನದ ಹಿನ್ನೆಲೆಯಲ್ಲಿ ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ ನಡೆಸಿದ್ದು, ಈ ಪ್ರಯುಕ್ತ ಕಾರ್ಕಳ ನಗರ ಬಿಜೆಪಿ ವತಿಯಿಂದ ಸೆ.17ರಂದು ಕಾರ್ಕಳದ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾದವರಿಗೆ ಹಣ್ಣು ಹಂಪಲು ವಿತರಿಸಲಾಯಿತು.


ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ನಗರ ಬಿಜೆಪಿ ಅಧ್ಯಕ್ಷ ರವೀಂದ್ರ ಮೊಯ್ಲಿ, ಮಂಡಲ ಕಾರ್ಯದರ್ಶಿ ಪ್ರಕಾಶ್ ರಾವ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿರಂಜನ್ ಜೈನ್, ಪುರಸಭೆಯ ಮಾಜಿ ಅಧ್ಯಕ್ಷೆ ಸುಮಾ ಕೇಶವ್, ಮಾಜಿ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರದೀಪ್, ಪುರಸಭಾ ಸದಸ್ಯರಾದ ಯೋಗೀಶ್ ದೇವಾಡಿಗ, ಭಾರತಿ ಅಮೀನ್, ಅಮರ್ ಶೆಟ್ಟಿಗಾರ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಯುವ ಮೋರ್ಚಾದಿಂದ ರಕ್ತದಾನ
ಕಾರ್ಕಳ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ವಿಖ್ಯಾತ್‌ ಶೆಟ್ಟಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್‌ ನಾಯಕ್‌, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್‌ ಸಾಲಿಯಾನ್‌, ಅವಿನಾಶ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದಿಂದ ವಿಶೇಷ ಪೂಜೆ

ಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಂಡಿಮಠ ಶ್ರೀ ಮೂಡು ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಕಾರ್ಕಳ ಬಿಜೆಪಿ ವಕ್ತಾರ ಹರೀಶ್ ಶೆಣೈ, ಉಪಾಧ್ಯಕ್ಷರಾದ ಜ್ಯೋತಿ ರಮೇಶ್, ಸುಪ್ರೀಯಾ ಶೆಟ್ಟಿ, ಪಲ್ಲವಿ ಪ್ರವೀಣ್, ಪ್ರಧಾನ ಕಾರ್ಯದರ್ಶಿ ವಿನಯಾ ಡಿ. ಬಂಗೇರ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ರವಿಕಾಂತ್, ಪುರಸಭಾ ಸದಸ್ಯೆ ಶಶಿಕಲಾ ಶೆಟ್ಟಿ ಉಪಸ್ಥಿತರಿದ್ದರು.

error: Content is protected !!
Scroll to Top