ಎಸ್‌ಐ ಪುತ್ರನ ವೀಲಿಂಗ್‌ ಹುಚ್ಚಿಗೆ ವೃದ್ಧ ಬಲಿ

ಮೈಸೂರು : ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಿಮ್ಮಾವು ಬಳಿ ಮಹಿಳಾ ಪಿಎಸ್​ಐ ಪುತ್ರನ ದ್ವಿಚಕ್ರ ವಾಹನ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧರೊಬ್ಬರು ಬಲಿಯಾಗಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಸೈಯ್ಯದ್ ಐಮಾನ್​ನನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಸೈಯ್ಯದ್ ನಂಬರ್ ಪ್ಲೇಟ್ ಇಲ್ಲದ ಬೈಕ್​ನಲ್ಲಿ ವ್ಹೀಲಿಂಗ್ ಮಾಡುವಾಗ ಉದಯಗಿರಿ ನಿವಾಸಿ ವೃದ್ಧ ಗುರುಸ್ವಾಮಿ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಗುರುಸ್ವಾಮಿ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಸೈಯ್ಯದ್ ಐಮಾನ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ವಿಚಾರಣೆ ನಡೆಸಿದಾಗ ತಾನು ನಂಜನಗೂಡು ಸಂಚಾರಿ ಪೊಲೀಸ್ ಠಾಣೆ ಪಿಎಸ್​ಐ ಯಾಸ್ಮಿನ್ ತಾಜ್ ಅವರ ಪುತ್ರ ಎಂದು ಹೇಳಿದ್ದಾನೆ.
ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಸೈಯ್ಯದ್​ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

error: Content is protected !!
Scroll to Top