ರಿಕ್ಷಾ ವಿದ್ಯುತ್‌ ಕಂಬಕ್ಕೆ ಡಿಕ್ಕಿ : ಯುವತಿ ಸಾವು

ಬಜಪೆ : ಆಟೋರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ಹಲವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.
ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತ ಯುವತಿ. ಅವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಈ ಪೈಕಿ ಮೀನಾಕ್ಷಿ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













































































































































































error: Content is protected !!
Scroll to Top