ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡಲು ಪ್ರಾಧಿಕಾರ ಆದೇಶ

ಅಡಕತ್ತರಿಯಲ್ಲಿ ಸಿಲುಕಿದ ಸಿದ್ದರಾಮಯ್ಯ ಸರಕಾರ

ಹೊಸದಿಲ್ಲಿ : ತಮಿಳುನಾಡಿಗೆ ಮತ್ತೆ ನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇಂದು ದಿಲ್ಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸಭೆಯಲ್ಲಿ ಖಡಕ್​ ಸೂಚನೆ ನೀಡಿದ್ದು, ಸಮಿತಿ ಆದೇಶ ಮುಂದುವರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ. ಸಮಿತಿ ಈ ಹಿಂದೆ ನೀಡಿದ್ದ ಇದೇ ಆದೇಶವನ್ನು ಪ್ರಾಧಿಕಾರ ಎತ್ತಿಹಿಡಿದಿದೆ.
ಸೆ.12ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 15 ನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದಿತ್ತು. ಇದೀಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀರು ಬಿಡಲು ಆದೇಶಿಸಿದೆ.
ರಾಜ್ಯದಲ್ಲಿ ಈ ವರ್ಷ ಭೀಕರ ಬರಗಾಲವಿದ್ದು, ಈಗಾಗಲೇ ಅಣೆಕಟ್ಟೆಗಳು ಅರ್ಧ ತುಂಬಿ ಚಿಂತೆ ಆವರಿಸಿಕೊಂಡಿದೆ. ಇದರ ನಡುವೆ ಸರಕಾರ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿದ್ದು, ಜನರ ವಿರೋಧವನ್ನೂ ಲೆಕ್ಕಿಸುತ್ತಿಲ್ಲ. ನೀರು ಹರಿಸುವುದನ್ನು ವಿರೋಧಿಸಿ ಜನರು ನಿತ್ಯ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದೀಗ ಪ್ರಾಧಿಕಾರ ನೀರು ಬಿಡಲೇ ಬೇಕು ಎಂದಿರುವುದರಿಂದ ಸಿದ್ದರಾಮಯ್ಯ ಸರಕಾರ ಅಡಕತ್ತರಿಯಲ್ಲಿ ಸಿಕ್ಕಿಕೊಂಡಿದೆ.

error: Content is protected !!
Scroll to Top