ಉಡುಪಿ ಜಿಲ್ಲೆಯಾದ್ಯಂತ ಸೆ. 19, 21, 23 ರಂದು ಮದ್ಯ ಮಾರಾಟ ನಿಷೇಧ

ಉಡುಪಿ : ಗಣೇಶ ಹಬ್ಬದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪವಿಭಾಗದ ವ್ಯಾಪ್ತಿಯಲ್ಲಿ ಸೆ. 19ರಂದು ಹಾಗೂ ಉಡುಪಿ ನಗರದಲ್ಲಿ (ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ) ಸೆ. 21 ಹಾಗೂ 23ರಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ನೀಡಿರುತ್ತಾರೆ.
ಗಣೇಶ ಹಬ್ಬ ಹಾಗೂ ವಿಗ್ರಹ ವಿಸರ್ಜನೆಯ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಈ ಕ್ರಮ ಕೈಗೊಂಡಿದ್ದಾರೆ.

error: Content is protected !!
Scroll to Top