ಫ್ಲೆಕ್ಸ್‌, ಬ್ಯಾನರ್ ಹೋರ್ಡಿಂಗ್‌‌ ವಿರುದ್ಧ ಹೈಕೋರ್ಟ್‌ ಕಿಡಿ

ಬೆಂಗಳೂರು : ನಗರದಲ್ಲಿ ಅನಧಿಕೃತ ಹೋರ್ಡಿಂಗ್‌, ಬ್ಯಾನರ್‌ ಮತ್ತು ಫ್ಲೆಕ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಗರಂ ಆಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ನ್ಯಾಯಾಲಯ ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿ ಬಿಬಿಎಂಪಿ ಕ್ರಮ ಕೈಗೊಂಡಿರುವ ವರದಿ ನೀಡುವಂತೆ ತಿಳಿಸಿದೆ. ಅಧಿಕಾರಿಗಳು ಮೃದು ಧೋರಣೆ ಹೊಂದಿದ್ದರೆ ಅದನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿರುವ ನ್ಯಾಯಾಲಯ ದೇಶದ ಅತ್ಯುತ್ತಮ ನಗರವನ್ನು ಹಾಳು ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. ಬಿಬಿಎಂಪಿ ಅಧಿಕಾರಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿ ತಿಳಿದಿರಬೇಕು. ಮಲಗಿದವರನ್ನು ಎಬ್ಬಿಸಬಹುದು. ಆದರೆ ಮಲಗಿದಂತೆ ನಟಿಸುವವರನ್ನು ಎಬ್ಬಿಸಲು ಸಾಧ್ಯವಿಲ್ಲಎಂದು ಕೋರ್ಟ್‌ ಕಿಡಿ ಕಾರಿದೆ.

ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಬಹುತೇಕ ಎಲ್ಲ ನಗರ, ಪಟ್ಟಣಗಳಲ್ಲೂ ಫ್ಲೆಕ್ಸ್‌, ಬ್ಯಾನರ್‌ ರಾರಾಜಿಸುತ್ತಿದೆ. ಸ್ಥಳೀಯಾಡಳಿತದ ಅನುಮತಿ ಪಡೆಯದೆ ಎಲ್ಲೆಂದರಲ್ಲಿ ಎಗ್ಗಿಲ್ಲದೇ ಫ್ಲೆಕ್ಸ್‌, ಬ್ಯಾನರ್‌ ಅಳವಡಿಸಲಾಗುತ್ತಿದೆ. ಕೆಲವೆಡೆ ಅನುಮತಿ ಪಡೆದರೂ ನಿಗದಿತ ದಿನಾಂಕದಂದು ಅಳವಡಿಸಿದ ಬ್ಯಾನರ್‌ ತೆರವಿಲ್ಲ. ಪುರಸಭೆ, ಗ್ರಾಮ ಪಂಚಾಯತ್‌ಗಳು ಈ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸುವುದು ಅಗತ್ಯವಾಗಿದೆ.error: Content is protected !!
Scroll to Top