ಉಡುಪಿ: ಮಡಿಕೇರಿಯ ಕಾಟಕೇರಿ ಬಳಿ ಹಾಲಿನ ಟ್ಯಾಂಕರ್ ಬೈಕಿಗೆ ಗುದ್ದಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಉಡುಪಿಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.
ಮಡಿಕೇರಿಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ ವಿಜೇಶ್ ಮೃತ ಯುವಕ.
ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಮತ್ತು ಶಿವಾನಂದ್ ಎಂಬವರು ಬೈಕ್‌ನಲ್ಲಿ ಮಡಿಕೇರಿಗೆ ಪ್ರಯಾಣಿಸುತ್ತಿದ್ದಾಗ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಹಾಲಿನ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಲಾರಿಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಬೈಕ್‌ಗೆ ಲಾರಿ ಡಿಕ್ಕಿ : ಉಡುಪಿಯ ಮೆಡಿಕಲ್ ವಿದ್ಯಾರ್ಥಿ ಸಾವು
