ಮಹೇಶ್ ಶೆಟ್ಟಿ ತಿಮರೋಡಿ ಭಾಗಿ
ಕಾರ್ಕಳ : ಸೌಜನ್ಯ ಪ್ರಕರಣ ಮರು ತನಿಖೆಗೆ ನಡೆಸುವಂತೆ, ಪ್ರಕರಣದ ನಿರ್ದೋಷಿ ಸಂತೋಷ್ ರಾವ್ ಗೆ ಸರಕಾರ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಸೆ. 24ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಕುಕ್ಕುಂದೂರು ಮೈದಾನದಲ್ಲಿ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಶಾಂತಿಯುತವಾಗಿ ಜನಾಂದೋಲನ ಆಯೋಜಿಸಲಾಗಿದೆ.
ಪ್ರಕರಣದ ಆರೋಪಿಗಳನ್ನು ದಿಲ್ಲಿಯ ನಿರ್ಭಯಾ ಪ್ರಕರಣದಂತೆ ಮರಣ ದಂಡನೆ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸೌಜನ್ಯ ಪರ ಹೋರಾಟ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಪ್ರತಿ ಗ್ರಾಮದಲ್ಲಿ ಪ್ರತಿಭಟನೆ
ಸಂವಿಧಾನ ಬದ್ಧವಾಗಿ ನಡೆಯುವ ಈ ಪ್ರತಿಭಟನೆಗೆ ಯಾರಾದರೂ ಅಡ್ಡಿಪಡಿಸಿದರೆ ಮುಂದಿನ ದಿನಗಳಲ್ಲಿ ಕಾರ್ಕಳದ ಪ್ರತಿ ಗ್ರಾಮ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ತಿಳಿಸಿದೆ. ಈ ಜನಾಂದೋಲನ ಸಭೆ ಯಾವುದೇ ಜಾತಿ, ಮತ, ಪಂಥ, ಧರ್ಮ, ಪಕ್ಷ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ, ಈ ಸಭೆ ಸೌಜನ್ಯ ಮೇಲಾದ ಅನ್ಯಾಯಕ್ಕೆ ನ್ಯಾಯ ನೀಡುವಂತಾಗಲು ಮಾತ್ರವಾಗಿದೆ ಎಂದು ಸಮಿತಿ ತಿಳಿಸಿದೆ.