ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಭಾಗಿ
ಕಾರ್ಕಳ: ಕಾರ್ಕಳ ಬ್ಲಾಕ್ ಹಾಗೂ ಹೆಬ್ರಿ ಬ್ಲಾಕ್ ವತಿಯಿಂದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಸೆ.23ರಂದು ಮಧ್ಯಾಹ್ನ 12 ಗಂಟೆಗೆ ಕಾರ್ಕಳ ದಾನಶಾಲೆ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ಮಹಿಳಾ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಚಿ ಸಚಿವ ಕೆ. ಅಭಯಚಂದ್ರ ಜೈನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಅಧ್ಯಕ್ಷರು ಹಾಗೂ ಪಕ್ಷದ ರಾಜ್ಯ ಜಿಲ್ಲಾಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ಎರಡೂ ಬ್ಲಾಕ್‌ನ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಡಿ.ಆರ್.ರಾಜು ವಿನಂತಿಸಿದ್ದಾರೆ.