ಶಿವಂಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ಮಿಯ್ಯಾರು ವಲಯ ಬಿ ಒಕ್ಕೂಟ ಶಿವಂಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕುಂಟಿಬೈಲು ಮುಗೆರ್ಕಳ ಸಬಾಭವನದಲ್ಲಿ ಜರುಗಿತು.
ಮಿಯ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸನ್ಮತಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸತ್ಯಂದ್ರ ನಾಯಕ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷೆ ಕಸ್ತೂರಿ ಭಾಗವಹಿಸಿದ್ದರು. ತಾಲೂಕಿನ ಯೋಜನಾಧಿಕಾರಿ ಹೇಮಲತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಒಕ್ಕೂಟದ ಅಧ್ಯಕ್ಷರು ವಿನೋದ ನಾಯಕ್ ಹಾಗೂ ನೂತನ ಅಧ್ಯಕ್ಷ ವಿಠಲ್ ಎಸ್. ಪೂಜಾರಿ ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಯಶೋದಾ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ನಿರೂಪಿಸಿದರು. ಸೇವಾ ಪ್ರತಿನಿಧಿ ಸುರೇಖ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೇಂದ್ರದ ಸದಸ್ಯರು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಕೇಂದ್ರದ ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ರಸಪ್ರಶ್ನೆ ಮಾಡಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.































































































































error: Content is protected !!
Scroll to Top