ಸೆ. 24 : ಸೌಜನ್ಯಾ ಪ್ರಕರಣ ಮರು ತನಿಖೆ ಆಗ್ರಹಿಸಿ ಕಾರ್ಕಳದಲ್ಲಿ ಜನಾಂದೋಲನ ಸಭೆ

ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರು ಭಾಗಿ

ಕಾರ್ಕಳ : ಸೌಜನ್ಯಾ ಪ್ರಕರಣ ಮರು ತನಿಖೆ ನಡೆಸಲು ಮತ್ತು ಪ್ರಕರಣದಲ್ಲಿ ನಿರ್ದೋಷಿ ಎಂದು ಸಾಬೀತಾಗಿರುವ ಸಂತೋಷ್ ರಾವ್‌ಗೆ ಸರಕಾರ ಸೂಕ್ತ ಪರಿಹಾರ ನೀಡಲು ಆಗ್ರಹಿಸಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಸೆ. 24ರಂದು ಬೆಳಗ್ಗೆ 9 ಗಂಟೆಗೆ ಕುಕ್ಕುಂದೂರು ಮೈದಾನದಲ್ಲಿ ಸೌಜನ್ಯಾ ಪರ ಹೋರಾಟ ಸಮಿತಿ ವತಿಯಿಂದ ಶಾಂತಿಯುತವಾಗಿ ಜನಾಂದೋಲನ ಸಭೆ ಆಯೋಜಿಸಲಾಗಿದೆ.
ಪ್ರಕರಣದ ಆರೋಪಿಗಳನ್ನು ದಿಲ್ಲಿಯ ನಿರ್ಭಯಾ ಪ್ರಕರಣದಂತೆ ಮರಣ ದಂಡನೆಗೆ ಗುರಿಪಡಿಸಬೇಕು ಎಂದು ಸೌಜನ್ಯಾ ಪರ ಹೋರಾಟ ಸಮಿತಿ ಪ್ರಕಟಣೆಯಲ್ಲಿ ಆಗ್ರಹಿಸಿದೆ.

ಪ್ರತಿ ಗ್ರಾಮದಲ್ಲಿ ಪ್ರತಿಭಟನೆ

ಸಂವಿಧಾನಬದ್ಧವಾಗಿ ನಡೆಯುವ ಈ ಪ್ರತಿಭಟನೆಗೆ ಯಾರಾದರೂ ಅಡ್ಡಿಪಡಿಸಿದರೆ ಮುಂದಿನ ದಿನಗಳಲ್ಲಿ ಕಾರ್ಕಳದ ಪ್ರತಿ ಗ್ರಾಮ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ತಿಳಿಸಿದೆ. ಈ ಜನಾಂದೋಲನ ಸಭೆ ಜಾತಿ, ಮತ, ಪಂಥ, ಧರ್ಮ, ಪಕ್ಷ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ, ಈ ಸಭೆ ಸೌಜನ್ಯಾ ಮೇಲಾದ ದೌರ್ಜನ್ಯಕ್ಕೆ ನ್ಯಾಯ ಒದಗಿಸಲು ಮಾತ್ರ ಎಂದು ಸಮಿತಿ ತಿಳಿಸಿದೆ.



































































































error: Content is protected !!
Scroll to Top