ಭಾಷಣಕ್ಕೆ ಮಾತ್ರ ಕರೆಸಿದ್ದೆವು, ಬೇರೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿಕೆ
ಮಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 7 ಕೋಟಿ ರೂ. ವಂಚಿಸಿದ ಚೈತ್ರಾ ಕುಂದಾಪುರ ಮತ್ತು ವಿಶ್ವಹಿಂದು ಪರಿಷ್ ಹಾಗೂ ಬಜರಂಗದಳ ನಡುವೆ ಯಾವುದೇ ಸಂಬಂಧ ಇಲ್ಲ ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಸ್ಪಷ್ಟನೆ ನೀಡಿದ್ದಾರೆ.
ಚೈತ್ರಾ ನಮ್ಮ ಸಂಘಟನೆಯ ಸದಸ್ಯೆ ಅಲ್ಲ, ಚೆನ್ನಾಗಿ ಭಾಷಣ ಮಾಡುತ್ತಿದ್ದುದರಿಂದ ಆಕೆಯನ್ನು ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗಿದೆ. ಈಗ ಆಕೆಯ ವಿರುದ್ಧ ವಂಚನೆಯ ಕೇಸ್ ದಾಖಲಾಗಿದೆ. ಯಾರು ತಪ್ಪು ಮಾಡಿದರೂ ಶಿಕ್ಷೆಯಾಗಬೇಕು. ಇಂತಹ ಘಟನೆಗಳಿಗೆ ನಮ್ಮ ಸಂಘಟನೆ ಆಸ್ಪದ ಹಾಗೂ ಸಹಕಾರ ನೀಡುವುದಿಲ್ಲ. ಗುರುಪುರ ಶ್ರೀರಾಜಶೇಖರಾನಂದ ಸ್ವಾಮೀಜಿಗೂ ಆಕೆಯ ವಂಚನೆ ಪ್ರಕರಣಕ್ಕೂ ಸಂಬಂಧ ಇಲ್ಲ. ಈ ಬಗ್ಗೆ ಎರಡು ತಿಂಗಳ ಹಿಂದೆಯೇ ಸ್ವಾಮೀಜಿ ನಮ್ಮ ಗಮನಕ್ಕೆ ತಂದಿದ್ದರು. ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.