ಬೆಂಗಳೂರಿನಲ್ಲಿ ಇನ್ನೊಂದು ಲವ್‌ ಜಿಹಾದ್‌ ಬೆಳಕಿಗೆ

ಮತಾಂತರವಾಗಲು ಕಿರುಕುಳ ಎಂದು ಮಹಿಳೆ ದೂರು

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಲಿವ್ ಇನ್ ಗೆಳತಿಗೆ ಕಿರುಕುಳ ನೀಡುತ್ತಿದ ಶ್ರೀನಗರ ಮೂಲದ ಬೆಂಗಳೂರಿನ 32 ವರ್ಷದ ಟೆಕ್ಕಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನೊಂದಿಗೆ ಇದ್ದ ಮಹಿಳೆಯನ್ನು ಒತ್ತಾಯಪೂರ್ವಕವಾಗಿ ಮತಾಂತರವಾಗಲು, ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಮೊಗಿಲ್ ಅಶ್ರಫ್ ಬೇಗ್ ಒತ್ತಾಯಿಸುತ್ತಿದ್ದ. ಈತ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂತ್ರಸ್ತೆಗೆ ಈತ 2018ರಿಂದಲೂ ಪರಿಚಯವಿದ್ದಾನೆ ಹಾಗೂ ಇಬ್ಬರೂ ಲಿವ್ ಇನ್ ರಿಲೇಷಷಿನ್‌ಪ್‌ನಲ್ಲಿದ್ದಾರೆ. ಮಹಿಳೆ ಸಹ ಟೆಕ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾಳೆ.
ಈ ಜೋಡಿ ಮದುವೆಯಾಗಲು ಯೋಜಿಸಿದ್ದರು. ಆದರೆ ಅಶ್ರಫ್ ಬೇಗ್ ಆಕೆಯನ್ನು ಇಸ್ಲಾಮ್‌ಗೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದ. ಅಷ್ಟೇ ಅಲ್ಲದೇ ವಿವಾಹವಾಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ತನ್ನೊಂದಿಗೆ ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಒಪ್ಪಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾಳೆ. ಬೇಗ್‌ನ ಸಹೋದರ ತನಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದಾನೆ, ನಾನು ಲವ್ ಜಿಹಾದ್‌ ಸಂತ್ರಸ್ತೆ, ನನ್ನ ಜೀವ ಅಪಾಯದಲ್ಲಿದೆ ಎಂದು ಟ್ವಿಟರ್‌ನಲ್ಲಿ ಬರೆದು ಪೊಲೀಸ್ ಅಧಿಕಾರಿಗಳನ್ನು ಟ್ಯಾಗ್ ಮಾಡಿದ್ದಾಳೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಜಮ್ಮು-ಕಾಶ್ಮೀರಕ್ಕೆ ತೆರಳಿ ಪತ್ತೆಮಾಡಿ ಬೆಂಗಳೂರಿಗೆ ಕರೆತಂದು ಕೋರ್ಟ್ ಎದುರು ಹಾಜರು ಪಡಿಸಲಾಗಿದೆ.







































































error: Content is protected !!
Scroll to Top