ಎಸ್ಸೆಸ್ಸೆಲ್ಸಿ, ಪಿಯುಸಿ : ಮೂರು ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ

ವರ್ಷಕ್ಕೆ ಮೂರು ಸಲ ಪರೀಕ್ಷೆ ಬರೆಯಲು ಹೀಗಿದೆ ನಿಯಮಾವಳಿ

ಬೆಂಗಳೂರು : ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ತೀರ್ಮಾನಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿಯ ಪ್ರಕಾರ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಪ್ರಥಮ ಬಾರಿಗೆ ಪರೀಕ್ಷೆ ಬರೆಯುವವರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ. ಹಾಗಾಗಿ ನೇರವಾಗಿ ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಹಾಜರಾಗುವಂತಿಲ್ಲ.
ವಿದ್ಯಾರ್ಥಿಗಳಿಗೆ ಆಂತರಿಕ ಅಂಕಗಳನ್ನು ನೀಡುವ ಸಂಬಂಧ ಜಿಲ್ಲಾ ಉಪನಿರ್ದೇಶಕರು ಅಗತ್ಯ ತನಿಖಾ ತಂಡವನ್ನು ರಚಿಸಿ ಪ್ರತಿಯೊಂದು ಕಾಲೇಜಿಗೆ ಭೇಟಿ ನೀಡಿ, ಹಾಜರಾದವರ, ಗೈರುಹಾಜರಾದವರ ಹಾಗೂ ನೋಂದಣಿಯಾದ ವಿದ್ಯಾರ್ಥಿಗಳ ಬಗ್ಗೆ ಪರಿಶೀಲನೆಯನ್ನು ನಡೆಸಬೇಕು ಎಂದು ಸೂಚಿಸಿದೆ.
ಪರೀಕ್ಷೆ-1ರಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ 2 ಮತ್ತು 3ನೆ ಪರೀಕ್ಷೆ ತೆಗೆದುಕೊಳ್ಳಲು ಇಚ್ಚೆ ಇಲ್ಲದಿದ್ದಲ್ಲಿ ಅಂತಹ ಸಂದರ್ಭದಲ್ಲಿ ಅವರಿಗೆ ಅಂಕಪಟ್ಟಿಗಳನ್ನು ವಿತರಿಸಲು ಕ್ರಮ ವಹಿಸಲಾಗುವುದು ಎಂದು ಇಲಾಖೆ ತಿಳಿಸಿದೆ.error: Content is protected !!
Scroll to Top