ಏಷ್ಯನ್‌ ಗೇಮ್ಸ್‌ : ಬೆಳ್ಳಿಯೊಂದಿಗೆ ಭಾರತ ಶುಭಾರಂಭ

ಏರ್‌ ರೈಫಲ್ಸ್‌, ಡಬಲ್ ಸ್ಕಲ್ಸ್‌ನಲ್ಲಿ ರಜತ ಪದಕ

ಹ್ಯಾಂಗ್ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ಗೆ ಶನಿವಾರ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ದಿನವೇ ಭಾರತದ ಕ್ರೀಡಾಪಟುಗಳು 2 ಬೆಳ್ಳಿಯೊಂದಿಗೆ ಪದಕ ಬೇಟೆ ಆರಂಭಿಸಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿತು.
ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರು 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೊದಲ ಪದಕವನ್ನು ಗೆದ್ದುಕೊಂಡಿದ್ದಾರೆ.
ಮತ್ತೊಂದೆಡೆ ಚೀನಾ 1896.6 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಮಂಗೋಲಿಯಾ ಒಟ್ಟು 1880 ಅಂಕಗಳೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.
ಏರ್ ರೈಫಲ್​ನಲ್ಲಿ ಭಾರತಕ್ಕೆ ಪದಕ ಸಿಕ್ಕ ಕೂಡಲೇ ಭಾರತದ ಅರ್ಜುನ್ ಜತ್ ಲಾಲ್ ಮತ್ತು ಅರವಿಂದ್ ಸಿಂಗ್ ಜೋಡಿಯು ಪುರುಷರ ಲೈಟ್‌ವೇಟ್ ಡಬಲ್ ಸ್ಕಲ್ಸ್‌ನ ಫೈನಲ್ Aನಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿತು. 2021ರಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ಪ್ರವೇಶಿಸಿದ ಅರ್ಜುನ್ ಲಾಲ್, ಅರವಿಂದ್ ಸಿಂಗ್ ಅವರೊಂದಿಗೆ ಶ್ಲಾಘನೀಯ ಪ್ರದರ್ಶನವನ್ನು ನೀಡಿದರು. ಇವರು 6.28.18 ಸಮಯಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು.error: Content is protected !!
Scroll to Top