ಅನುಮತಿ ರಹಿತ ಫ್ಲೆಕ್ಸ್ ತೆರವು – ದೂರು ದಾಖಲು
ಕಾರ್ಕಳ : ಕುಕ್ಕುಂದೂರು ಪಂಚಾಯತ್ ಮೈದಾನದಲ್ಲಿ ನಡೆದ ಕು. ಸೌಜನ್ಯ ಪರ ಪ್ರತಿಭಟನೆ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಪುರಸಭಾ ವ್ಯಾಪ್ತಿಯಲ್ಲಿ ಅನುಮತಿ ರಹಿತ ಬ್ಯಾನರ್ ಅಳವಡಿಕೆ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ಆನೆಕೆರೆ ಉದ್ಯಾನವನ ಬದಿ, ದಾನಶಾಲೆ, ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದ ಬಳಿ ಪುರಸಭೆಯಿಂದ ಅನುಮತಿ ಪಡೆಯದೇ ಸೆ. 23ರ ರಾತ್ರಿ ಫ್ಲೆಕ್ಸ್ ಗಳನ್ನು ಅಳವಡಿಸಿ ಸಾರ್ವಜನಿಕ ಸ್ಥಳ ವಿರೂಪಗೊಳಿಸಲಾಗಿದೆ ಎಂದು ಪುರಸಭಾ ಹಿರಿಯ ಆರೋಗ್ಯ ನಿರೀಕ್ಷಕಿ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.