ಕಾರ್ಕಳ : ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹೋಸ್ಮರು ವಲಯದ ಈದು ಸಿ ಕಾರ್ಯಕ್ಷೇತ್ರದಲ್ಲಿ ಶಿವಾನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸೆ. 24 ರಂದು ಜರುಗಿತು. ಆಂಬುಲೆನ್ಸ್ ಆರೋಗ್ಯ ಸಹಾಯಕಿ ಪೂರ್ಣಿಮಾ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಪರಸ್ಪರ ಯುವಕ ಮಂಡಳಿಯ ಅಧ್ಯಕ್ಷ ಜಗದೀಶ್ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಹೊಸ್ಮಾರು ವಲಯದ ಮೇಲ್ವಿಚಾರಕ ಮನೋಜ್ ಹೆಗ್ಡೆ, ಬ್ರಹ್ಮ ಮೊಗೇರ ದೇವಸ್ಥಾನದ ಮಹಿಳಾ ಮಂಡಳಿ ಅಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು. ಸಂಯೋಜಕಿ ಗೀತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಶುಭ ಕೇಂದ್ರದ ವರದಿ ಮಂಡನೆ ಮಾಡಿದರು. ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು. ಹೊಸ್ಮಾರು ವಲಯಾಧ್ಯಕ್ಷ ಅಶೋಕ್ ಎಂ. ಕೆ. ವಂದಿಸಿದರು. ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಈದು : ಶಿವಾನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ
