ಅ. 1 : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿಶೇಷ ಸಭೆ

ಕಾರ್ಕಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿಶೇಷ ಸಭೆ ಅ. 1 ರಂದು ಕೊಪ್ಪಳದ ಹಿರೇಸಿಂದೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಸಂಘದ ಬೈಲಾ ಉಪವಿಧಿಗಳು 2022-ಉಪವಿಧಿಗಳಿಗೆ ತಿದ್ದುಪಡಿ ತರಲು ಸಂಘದ ಮಹಾಸಭೆ ವರ್ಚುವಲ್‌ ವಿಧಾನದ ಮೂಲಕ ರಾಜ್ಯಾಧ್ಯಕ್ಷ ಸಿ. ಎಸ್‌. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಯಲ್ಲಿ ಕಾರ್ಕಳ ತಾಲೂಕಿನ ಸದಸ್ಯರು ಭಾಗಿಯಾಗುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ತಾಲೂಕು ಶಾಖೆಯ ಅಧ್ಯಕ್ಷ ಬಾಲಕೃಷ್ಣ ಎನ್.‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.error: Content is protected !!
Scroll to Top