ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಸನ್ನಿಧಿ ( ವಾಣಿಜ್ಯ ವಿಭಾಗ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ಕಾರ್ಕಳ ತಾಲೂಕು ವಾಲಿಬಾಲ್ ತಂಡದ ಎಲ್ಲಾ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.
ವಾಲಿಬಾಲ್ : ಜ್ಞಾನಸುಧಾದ ಸನ್ನಿಧಿ ರಾಜ್ಯಮಟ್ಟಕ್ಕೆ
