ದತ್ತ ಕುಮಾರ್ ಅವರಿಗೆ ಪಿಎಚ್‌ಡಿ ಪದವಿ

ಕಾರ್ಕಳ : ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದತ್ತ ಕುಮಾರ್ ಅವರು ರೂರಲ್ ಇನ್ಫ್ರಾಸ್ಟ್ರಕ್ಚರ್ ಫಂಡಿಂಗ್- ಎ ಸ್ಟಡಿ ಆನ್ ಯುಟಿಲೈಜೇಷನ್ ಅಂಡ್ ಡೆವಲಪ್ಮೆಂಟ್ ಇನ್ ಉಡುಪಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ ಎಂಬ ವಿಷಯದ ಕುರಿತಾಗಿ ಮಂಡಿಸಿದ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಎ. ಸಿದ್ದಿಕ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಸಿದ್ಧಪಡಿಸಿದ್ದರು.

ದತ್ತ ಕುಮಾರ್ ತಟ್ಟೂರಿನ ದಿ. ಅಣ್ಣು ನಾಯಕ್ ಮತ್ತು ಜಯಶ್ರೀ ನಾಯಕ್ ದಂಪತಿ ಪುತ್ರ. ಬೈರಂಜೆಯ ಶ್ರೀ ಶಾರದಾ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪರ್ಕಳ ಹೈಸ್ಕೂಲ್‌ನಲ್ಲಿ ಪ್ರೌಢ ಶಿಕ್ಷಣ, ಹಿರಿಯಡ್ಕದ ಸರಕಾರಿ ಪದವಿಪೂರ್ವ ಕಾಲೇಜನಲ್ಲಿ ಪಿಯುಸಿ, ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂಕಾಂ ಪದವಿಯನ್ನು ಪಡೆದಿರುತ್ತಾರೆ. 5 ವರ್ಷ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.error: Content is protected !!
Scroll to Top