ಮಂಗಳೂರು ವೃತ್ತದಲ್ಲಿ 20 ಹುದ್ದೆ, ಅ.26 ಕೊನೆಯ ದಿನಾಂಕ
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 310 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಕೊನೆಯ ದಿನವಾಗಿದೆ. ನೇಮಕಾತಿ ಅಧಿಸೂಚನೆಯನ್ನು ಕರ್ನಾಟಕ ಅರಣ್ಯ ಇಲಾಖೆಯ https://aranya.gov.in/ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿ ಎಸ್.ಎಸ್.ಎಲ್.ಸಿ. ಅಥವಾ ಎಸ್.ಎಸ್.ಎಲ್.ಸಿ. ತತ್ಸಮಾನ ಅರ್ಹತೆ ಹೊಂದಿರಬೇಕು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ, ಇಲಾಖಾ ವೆಬ್‌ಸೈಟ್‌ನಿಂದ ಮುದ್ರಿತ ಅರ್ಜಿ ಶುಲ್ಕದ ಚಲನ್ ಪ್ರತಿಯನ್ನು ತೆಗೆದುಕೊಂಡು, ಇ-ಪಾವತಿ ಸೌಲಭ್ಯವಿರುವ ಭಾರತೀಯ ಅಂಚೆ ಕಚೇರಿಯಲ್ಲಿ ಈ ಪ್ರತಿಯನ್ನು ಹಾಜರುಪಡಿಸಿ, ಪ್ರವರ್ಗವಾರು ನಿಗದಿತ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಪಾವತಿಸಬೇಕು.
ವಯೋಮಿತಿ: ಅಭ್ಯರ್ಥಿಗಳು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಅಧಿಸೂಚನೆಯ ದಿನಾಂಕಕ್ಕೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯೊಳಗೆ ಸಾಮಾನ್ಯ ಅಭ್ಯರ್ಥಿ ಗರಿಷ್ಠ ವಯೋಮಿತಿ 30 ವರ್ಷ. ಪವರ್ಗ 2ಎ, 2ಬಿ, 3ಎ, 3ಬಿ ಹಿಂದುಳಿದ ಪ್ರವರ್ಗಗಳು ಗರಿಷ್ಠ ವಯೋಮಿತಿ 32 ವರ್ಷ. ಪರಿಶಿಷ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಗರಿಷ್ಠ ವಯೋಮಿತಿ 33 ವರ್ಷ.
ಮಾಜಿ ಸೈನಿಕರಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿ ನಿಯಮಾನುಸಾರ ನಿವೃತ್ತಿ/ ಡಿಮೊಬಿಲೈಸೇಷನ್ ಅಥವಾ ರಿಟ್ರೆಂಚ್‌ಮೆಂಟ್ ಹೊಂದಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅವರು ಯಾವ ಪ್ರವರ್ಗಕ್ಕೆ ಸೇರಿರುತ್ತಾರೆಯೊ ಈ ಮೇಲಿನ ಪ್ರವರ್ಗಕ್ಕೆ ನಿಗದಿಪಡಿಸಿದ ಗರಿಷ್ಠ ವಯೋಮಿತಿಗೆ ಅವರು ಎಷ್ಟು ವರ್ಷ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿರುವರೋ ಅಷ್ಟು ವರ್ಷಗಳಿಗೆ ಮೂರು ವರ್ಷ ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.