ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವುದು ಅವಶ್ಯ – ಉದಯ ಶೆಟ್ಟಿ ಮುನಿಯಾಲು
ಕಾರ್ಕಳ : ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರ, ಧಾರ್ಮಿಕ ಪ್ರಜ್ಞೆ ಮೂಡಿಸುವುದು ಕೂಡ ಅವಶ್ಯ. ಸಾರ್ವಜನಿಕ ಗಣೇಶೋತ್ಸವದಂತಹ ಕಾರ್ಯಕ್ರಮಗಳು ಈ ನಿಟ್ಟಿನಲ್ಲಿ ಪೂರಕವೆಂದು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ಹೇಳಿದರು.
ಅವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸೂರಾಲು ಇದರ ವತಿಯಿಂದ ನಡೆದ 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರ್ಚಕ ರಮಾನಂದ ಉಪಾಧ್ಯಾಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಾರ್ವಜನಿಕ ಗಣೇಶೋತ್ಸವವು ಸಂಘಟನಾತ್ಮಕ ಶಕ್ತಿಯನ್ನು ನೀಡುವ ಜೊತೆಗೆ ಹಿಂದೂ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಅರ್ಚಕರಾದ ರಮಾನಂದ ಉಪಾಧ್ಯಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ದೇಶಾದ್ಯಂತ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವವು ಜನರಲ್ಲಿ ಸಂಘಟನಾತ್ಮಕ ಶಕ್ತಿಯನ್ನು ನೀಡುವ ಜೊತೆಗೆ ಹಿಂದೂ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶುಭ ಹಾರೈಸಿದರು, ಗಣೇಶೋತ್ಸವ ಸಮಿತಿ ಅಧ್ಯಕ್ಷ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಸನ್ಮಾನ
ಹಿರಿಯ ಅರ್ಚಕ ರಾಘವೇಂದ್ರ ಉಪಾಧ್ಯಾಯ ಹಾಗೂ ಸೂರಾಲು ಗುಂಡಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡಿರುವ ಮುಖ್ಯ ಶಿಕ್ಷಕಿ ಲಿಡಿಯ ಮರಿಯಾ ಡಿಸೋಜ ಅವರನ್ನು ಸನ್ಮಾನಿಸಲಾಯಿತು.
ಗಣೇಶೋತ್ಸವದ ಪ್ರಯುಕ್ತ ನಡೆದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.
ಸಮಿತಿ ಗೌರವಾಧ್ಯಕ್ಷರಾದ ಮಾದೇಶ್ ಎಸ್. ಸುಧಾಕರ್ ಎಂ. ಶೆಟ್ಟಿ, ಜಯಪ್ರಕಾಶ್ ದೇವಾಡಿಗ, ಶಿವಾಜಿ ರಾವ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ನಿಶ್ಮಿತಾ, ಮಾನ್ಯಶ್ರೀ ಮತ್ತು ಶ್ರೀಧ ಪ್ರಾರ್ಥಿಸಿದರು. ಶ್ರೀನಿಧಿ, ದಿಶಾ, ಅನುಶ್ರೀ, ಸುಶ್ಮಿತಾ ಮತ್ತು ದೀಕ್ಷಿತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು, ಸಮಿತಿಯ ಕಾರ್ಯದರ್ಶಿ ಮಂಜುನಾಥ್ ಕೋಟ್ಯಾನ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಉಮೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.