ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಬ್ರಹ್ಮಾವರದ ಎಸ್ಎಮ್ಎಸ್ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡವನ್ನು ಪ್ರತಿನಿಧಿಸಿದ್ದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ತೆಯ ತನ್ಮಯ್ (7ನೇ ತರಗತಿ), ಗಗನ್ ಶೆಟ್ಟಿ (8ನೇ ತರಗತಿ) ತಮ್ಮ ಅತ್ಯುತ್ತಮ ಪ್ರದರ್ಶನದ ಮೂಲಕ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿನೀತ್ ಪೂಜಾರಿ (6ನೇ ತರಗತಿ), ಅರ್ಜಾನ್, ತನ್ಮಯ್ (7ನೇ ತರಗತಿ) ಪಾರ್ಥೀವ್, ಗಗನ್ (8ನೇ ತರಗತಿ) ತಂಡದಲ್ಲಿದ್ದರು.
ಕ್ರಿಕೆಟ್ ಪಂದ್ಯಾಟ : ಕ್ರೈಸ್ಟ್‌ಕಿಂಗ್‌ನ ಇಬ್ಬರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ
