ಫ್ರೀಡಂ ಪಾರ್ಕ್‌ನಲ್ಲಿ ರೈತ ಆತ್ಮಾಹುತಿಗೆ ಯತ್ನ

ಮರಕ್ಕೆ ನೇಣು ಹಾಕಿಕೊಳ್ಳಲು ಮುಂದಾದ ರೈತನನ್ನು ಪಾರು ಮಾಡಿದ ಪೊಲೀಸರು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ರೈತ ಪರ ಸಂಘಟನೆಗಳು ಧರಣಿ ನಡೆಸುತ್ತಿದ್ದ ವೇಳೆ ರೈತನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಕ್ಷಣ ರೈತನನ್ನು ರಕ್ಷಿಸಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆದಿದ್ದಾರೆ.ರೈತ ತನ್ನ ಹಸಿರು ಶಾಲನ್ನೇ ಉರುಳು ಮಾಡಿಕೊಂಡು ನೇಣು ಹಾಕಿಕೊಳ್ಳಲು ಯತ್ನಿಸಿದ್ದಾರೆ.
ಧರಣಿ ವೇಳೆ ಓರ್ವ ಕನ್ನಡಪರ ಹೋರಾಟಗಾರ ಕುಸಿದು ಬಿದ್ದಿದ್ದಾರೆ. ಅಸ್ವಸ್ಥಗೊಂಡ ಕಾರ್ಯಕರ್ತನನ್ನು ತಕ್ಷಣವೇ ಪೊಲೀಸರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಫ್ರೀಡಂ ಪಾರ್ಕ್ ಬಳಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು ಐನೂರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನಾಲ್ಕು ಕೆಎಸ್ಆರ್​ಪಿ ತುಕಡಿ, ಒಂದು ಅಗ್ನಿಶಾಮಕ ವಾಹನ, ಒಂದು ವಾಟರ್ ಜೆಟ್ ನಿಯೋಜನೆ ಮಾಡಲಾಗಿದೆ.
ಎಸ್.ಎಲ್‌. ಭೈರಪ್ಪ, ಚಂದ್ರಶೇಖರ್ ಕಂಬಾರ, ನಾಗತೀಹಳ್ಳಿ ಚಂದ್ರಶೇಖರ್ ಸೇರಿದಂತೆ ಕಾವೇರಿ ವಿಚಾರದ ಬಗ್ಗೆ ಧ್ವನಿ ಎತ್ತದ ಸಾಹಿತಿಗಳ‌ ಪೋಸ್ಟರ್ ಹಿಡಿದು ನಿನ್ನೆ ತಡ ರಾತ್ರಿ ಫ್ರೀಡಂ ಪಾರ್ಕ್​ ಬಳಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರು ಸುಮಾರು 50ಕ್ಕೂ ಹೆಚ್ಚು ಜನರನ್ನು ರಾತ್ರಿಯೇ ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ವಿವಿಧ ರೀತಿಯಲ್ಲಿ ಪ್ಲಾನ್‌ ಮಾಡಿದ್ದವರನ್ನ ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 2016ರಲ್ಲಿ ಬೆಂಕಿ ಹಚ್ಚಿದ್ದವರು, ಕಲ್ಲು ತೂರಾಟ ಮಾಡಿ ಗಲಭೆ ಮಾಡಿದ್ದವರನ್ನು ವಶಕ್ಕೆ ಪಡೆಯಲಾಗಿದೆ.









































































error: Content is protected !!
Scroll to Top