ಸೃಜನಶೀಲ ಕಲಿಕೆಗೆ ಎನ್‌ಎಸ್‌ಎಸ್‌ ಉತ್ತಮ ವೇದಿಕೆ : ಸವಿತಾ ಎರ್ಮಾಳ್

ಕಾರ್ಕಳ : ವಿದ್ಯಾರ್ಥಿ ಜೀವನದಲ್ಲೇ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿನ ಸೃಜನಶೀಲ ಕಲಿಕೆಗೆ ಎನ್‌ಎಸ್‌ಎಸ್‌ ಉತ್ತಮ ವೇದಿಕೆ ಎಂದು ಮಂಗಳೂರು ಎನ್‌ಎಸ್‌ಎಸ್ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಅಭಿಪ್ರಾಯಪಟ್ಟರು.

ಅವರು ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಎನ್‌ಎಸ್‌ಎಸ್‌ ಶಿಸ್ತು, ಸಂಯಮ, ಸಮಯ ಪಾಲನೆ, ಸೇವಾ ಮನೋಭಾವದೊಂದಿಗೆ ಜೀವನ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತದೆ ಎಂದರು.

ಎನ್ಎಸ್ಎಸ್ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಇದೇ ಸಂದರ್ಭ ಬಹುಮಾನ ವಿತರಿಸಲಾಯಿತು. ಕಾಲೇಜು ಪ್ರಾಂಶುಪಾಲ ಹಾಗೂ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಓ ದಿನೇಶ್ ಎಂ. ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಸಾಹಿತ್ಯ, ಎನ್ಎಸ್ಎಸ್ ವಿದ್ಯಾರ್ಥಿ ನಾಯಕಿ ಸಮಿಯ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ರವಿ ಜಿ. ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಮಿತ್ರಾ ವಂದಿಸಿದರು.







































error: Content is protected !!
Scroll to Top