ಕಾರ್ಕಳ : ಕೈರಬೆಟ್ಟು ಶಾಲೆಯಲ್ಲಿ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಬೆಳ್ಮಣ್ ವೃತ್ತಮಟ್ಟದ ಕ್ರೀಡಾಕೂಟ ಹಾಗೂ ನೂತನ ತರಗತಿಯ ಉದ್ಘಾಟನಾ ಸಮಾರಂಭವು ಸೆ. 27 ರಂದು ನಡೆಯಲಿರುವುದು. ಸಮಾರಂಭದ ಉದ್ಘಾಟನೆಯನ್ನು ಕಾರ್ಕಳದ ಶಾಸಕ ಮಾಜಿ ಸಚಿವ ವಿ. ಸುನೀಲ್ ಕುಮಾರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಯಾ ಗ್ರಾ. ಪಂ. ಅಧ್ಯಕ್ಷೆ ಪೂಜಾ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಕೋಟ್ಯಾನ್, ಪಂಚಾಯತ್ ಸದಸ್ಯರು, ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ಸುನೀಲ್ ಕೋಟ್ಯಾನ್, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿರುವರು ಎಂದು ಶಾಲಾ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೈರಬೆಟ್ಟು ಶಾಲೆಯಲ್ಲಿ ಬೆಳ್ಮಣ್ ವೃತ್ತಮಟ್ಟದ ಕ್ರೀಡಾಕೂಟ
