ಉಡುಪಿ : 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಭಯ ತಾಲೂಕಿನ ನೀರೆ ಮತ್ತು ಮಡಾಮಕ್ಕಿ ಗ್ರಾಮ ಪಂಚಾಯತ್ ಸೇರಿದಂತೆ ಉಡುಪಿ ಜಿಲ್ಲೆಯ ಏಳು ಪಂಚಾಯತ್ ಆಯ್ಕೆಯಾಗಿರುತ್ತದೆ. ಬ್ರಹ್ಮಾವರದ ಕೋಡಿ, ಬೈಂದೂರಿನ ಕಾಲ್ತೋಡು, ಕಾಪುವಿನ ಬೆಳ್ಳೆ, ಕುಂದಾಪುರದ ಶಂಕರನಾರಾಯಣ ಹಾಗೂ ಉಡುಪಿಯ ಅಲೆವೂರು ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ.
ಸೆ. 25ರಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜರುಗಿದ ರಾಜ್ಯಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅ. 2 ರಂದು ಗಾಂದಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರುಗಲಿರುವುದು.