ಪಡುಕುತ್ಯಾರು : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಸೆ. 29ರಂದು ಸಮಾಪ್ತಿಗೊಳ್ಳಲಿದ್ದು, ಅಂದು ಸೀಮೋಲ್ಲಂಘನ, ದಿಗ್ವಿಜಯ ಮೆರವಣಿಗೆ ಬಳಿಕ ಸಮಾರೋಪ ಸಮಾರಂಭ ಪಡುಕುತ್ಯಾರಿನ ಮಹಾಸಂಸ್ಥಾನದಲ್ಲಿ ನಡೆಯಲಿದೆ.
ವಿಶ್ವಕರ್ಮ ಯಜ್ಞದ ಬಳಿಕ ಮಹಾಸಂಸ್ಥಾನದ ಬಳಿ ಮಠದ ಸಮೀಪದಲ್ಲಿ ಸೀಮೋಲ್ಲಂಘನ-ದಿಗ್ವಿಜಯ ಮೆರವಣಿಗೆಯ ಮೂಲಕ ಕಟಪಾಡಿಗೆ ಮಹಾಸ್ವಾಮಿಗಳವರ ವೃಂದಾವನ, ಕಟಪಾಡಿ ವೇಣುಗಿರಿಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ, ಮಹಾಸಂಸ್ಥಾನದ ಸಂದರ್ಶನ ಸೇವೆ ಸಮರ್ಪಣೆ ಮತ್ತು ಪೂಜೆ ನಂತರ ಕಾಪು ಶ್ರೀ ಕಾಳಿಕಾಂಬಾ ದೇವಳ-ಪಡುಕುತ್ಯಾರು, ಶ್ರೀ ದುರ್ಗಾದೇವಿ ಮಂದಿರ ದಾರಿಯಾಗಿ ಪಡುಕುತ್ಯಾರು ಶ್ರೀಮತ್ ಆನೆಗುಂದಿ ಮಠಕ್ಕೆ ಆಗಮಿಸಲಿದ್ದಾರೆ. ನಂತರ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಪಾದಪೂಜೆ ನಡೆಯಲಿದ್ದು, ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ಸಮಾರೋಪ ಸಮಾರಂಭ ನಡೆಯಲಿದೆ.

ಈ ಸಂದರ್ಭ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸುವರು. ಆನೆಗುಂದಿ ಪೀಠದ ಆಸ್ಥಾನ ವಿದ್ವಾಂಸ ಪಂಜ ಭಾಸ್ಕರ ಭಟ್, ಜ್ಯೋತಿಷಿ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು, ಹುಬ್ಬಳ್ಳಿ ವೇದಬ್ರಹ್ಮ ಶಂಕರಾಚಾರ್ಯ ಗುರುನಾಥಾಚಾರ್ಯ ಕಡ್ಲಾಸ್ಕರ್ ಉಪಸ್ಥಿತಿಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಕರ್ನಾಟಕ ಸರಕಾರದ ವಿಶ್ರಾಂತ ಕಾರ್ಯದರ್ಶಿ ಕೆ. ಎಸ್ ಪ್ರಭಾಕರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಹಾಸಂಸ್ಥಾನದ ವಿಶ್ವಕರ್ಮ ಧ್ವಜ ಸಮಿತಿ ಸಂಚಾಲಕ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಸಮಾಜ ಐಕ್ಯ, ಸಂಘಟನೆ ಪ್ರತೀಕ ವಿಶ್ವಕರ್ಮ ಧ್ವಜ ಎನ್ನುವ ಬಗ್ಗೆ ಸಂದೇಶ ನೀಡುವರು.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಬಾಡೂರು ಎನ್. ಸುಬ್ರಹ್ಮಣ್ಯ ಅವರಿಗೆ ಗೌರವಾಭಿನಂದನೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವಾರಾಜ್ ಎಸ್. ತಂಗಡಗಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಿಕಟಪೂರ್ವ ಅಧ್ಯಕ್ಷ ಬಾಬು ಪತ್ತಾರ ಹಾಗೂ ಕೋಟ ಅಮೃತೇಶ್ವರಿ ದೇವಸ್ಥಾನದ ಧರ್ಮದರ್ಶಿ ಆನಂದ ಸಿ. ಕುಂದರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಹರೀಶ್ ಆಚಾರ್ಯ ಜಲಕದಕಟ್ಟೆ, ಎಸ್.ಕೆ.ಜಿ.ಐ ಕೋ-ಆಪ್ ಸೊಸೈಟಿ ಅಧ್ಯಕ್ಷ ಉಪೇಂದ್ರ ಆಚಾರ್ಯ ಪೆರ್ಡೂರು, ವಿಶ್ವಕರ್ಮ ಒಕ್ಕೂಟ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ ಶುಭಾಸಂಶನೆ ಗೈಯ್ಯಲಿದ್ದಾರೆ. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ. ವಿ ಗಂಗಾಧರ ಆಚಾರ್ಯ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ಕುತ್ಯಾರು ಗೌರವ ಉಪಸ್ಥಿತಿಯಲ್ಲಿ ಸಮಾರಂಭ ನಡೆಯಲಿದೆ.