ಕಾರ್ಕಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಸಕ್ಷಮ ಪ್ರಾಧಿಕಾರ ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾರ್ಕಳ ರೋಟರಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಭವ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ, ಲಿಂಗಾನುಪಾತದ ಮಹತ್ವ ಹಾಗೂ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯ ಅರಿವು ಜಾತ ಕಾರ್ಯಕ್ರಮ ಸೆ. 26 ರಂದು ಜರಗಿತು.
ಮೊದಲು ಕಾರ್ಕಳದ ಬಸ್ ನಿಲ್ದಾಣದ ಪರಿಸರದಲ್ಲಿ ಬೃಹತ್ ಜಾತ ಕಾರ್ಯಕ್ರಮ ನಡೆಯಿತು. ಬಳಿಕ ಸರಕಾರಿ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಮಾಹಿತಿ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಶಿಕಲಾ ಎಸ್., ಲಿಂಗಾನುಪಾತದ ಕುರಿತಾಗಿ ಮಾಹಿತಿ ನೀಡಿದರು. ರೋಟರಿ ಸಂಸ್ಥೆಯ ಅಧ್ಯಕ್ಷ ಜಾನ್ ಆರ್. ಡಿಸಿಲ್ವಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಧುಕರ್ ಹೆಗ್ಡೆ, ವಲಯ ಐದರ ಸಹಾಯಕ ಗವರ್ನರ್ ಶೈಲೇಂದ್ರ ರಾವ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಸಾಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಸಂಸ್ಥೆಯ ಸದಸ್ಯರು, ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು, ಸರಕಾರಿ ನರ್ಸಿಂಗ್ ಆಸ್ಪತ್ರೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಶಶಿಧರ್ ಎಚ್. ಕಾರ್ಯಕ್ರಮ ನಿರೂಪಿಸಿ, ಸರಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕ ಕಿರಣ್ ಬಾಬು ವಂದಿಸಿದರು.