ಕಾರ್ಕಳ : ಶ್ರೀ. ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ಹಾಗೂ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸಹಯೋಗದಲ್ಲಿ ಗಾಂಧೀಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಅ. 2 ರಂದು ಬಾಹುಬಲಿ ಪ್ರವಚನಮಂದಿರದಲ್ಲಿ ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ನಡೆಯಲಿದೆ.
ಬೆಳಿಗ್ಗೆ 9:30 ಗಂಟೆಗೆ 1611ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರಿಂದ ಜಾಥಾ ಉದ್ಘಾಟನೆಯಾಗಲಿದೆ. ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ. ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್‌ನ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಆಶಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಅಭಯಚಂದ್ರ ಜೈನ್, ತಹಶೀಲ್ದಾರ್ ಅನಂತಶಂಕರ್ ಬಿ., ಮೂಡಬಿದ್ರೆ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಭಾಶ್ಚಂದ್ರ ಚೌಟ, ಹೆಬ್ರಿ ತಾಲೂಕು ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.































