ಏಷ್ಯನ್ ಗೇಮ್ಸ್ : ​ಶೂಟಿಂಗ್‌ನಲ್ಲಿ ಬಂಗಾರ ಗೆದ್ದ ಭಾರತದ ತಂಡ

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಗುರುವಾರವೂ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.

10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರನ್ನು ಒಳಗೊಂಡ ಪುರುಷರ 10 ಮೀಟರ್ ಏರ್ ಪಿಸ್ತೂಲ್ ತಂಡದಲ್ಲಿ ಒಟ್ಟು 1734 ಸ್ಕೋರ್ ಗಳಿಸುವ ಮೂಲಕ ಚಿನ್ನ ಗೆದ್ದಿದ್ದಾರೆ. ಕೇವಲ ಒಂದು ಅಂಕದ ಅಂತರದಲ್ಲಿ ಚೀನಾವನ್ನು ಸೋಲಿಸುವ ಮೂಲಕ ಭಾರತ ಚಿನ್ನದ ಪದಕಕ್ಕೆ ಮುತ್ತಿಕ್ಕುವಂತೆ ಮಾಡಿದೆ.

ವುಶು ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದ ರೋಶಿಬಿನಾ ದೇವಿ
ಏಷ್ಯನ್ ಗೇಮ್ಸ್​ನ ಮಹಿಳೆಯರ 60 ಕೆಜಿ ವುಶು ಫೈನಲ್‌ನಲ್ಲಿ ಭಾರತದ ರೋಶಿಬಿನಾ ದೇವಿ ನವೋರೆಮ್ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಮಹಿಳೆಯರ 60 ಕೆಜಿ ವುಶು ಸಂಡಾ ಫೈನಲ್‌ನಲ್ಲಿ ಭಾರತದ ನವೋರೆಮ್ ರೋಶಿಬಿನಾ ದೇವಿ ಅವರು ಚೀನಾದ ಹೆವಿವೇಟ್ ವು ಕ್ಸಿಯಾವೊಯ್ ವಿರುದ್ಧ 0-2 ಅಂತರದ ಸೋಲಿನ ನಂತರ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.







































































error: Content is protected !!
Scroll to Top