ಕಾರ್ಕಳ : 110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ಮುಂಡ್ಕೂರು, ಬೆಳ್ಮಣ್, ನಂದಳಿಕೆ, ಸೂಡ ಫೀಡರ್‌ನಲ್ಲಿ ಅ. 3 ರಂದು ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚೇರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಸೂಡ, ಸಕ್ಕೇರಿಬೈಲು, ಕೊರಜೆ, ಸೂಡ ಗರಡಿ, ಪಡುಬೆಟ್ಟು, ಸೂಡ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಅ. 3 : ಕಾರ್ಕಳದ ವಿವಿಧೆಡೆ ವಿದ್ಯುತ್ ಸ್ಥಗಿತ






























































