ಸಾಣೂರು ಗ್ರಾಮ ಪಂಚಾಯತ್‌ಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ – 2023 ಪ್ರಶಸ್ತಿ

ಅ. 2 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

ಕಾರ್ಕಳ : ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್‌ ಯೋಜನೆಯಡಿ ನಡೆಸುವ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ – 2023 ಸಮೀಕ್ಷ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್‌ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದೆ. ಅ. 2 ರಂದು ಬೆಂಗಳೂರಿನಲ್ಲಿ ವಿಧಾನ ಸೌಧದ ಬ್ಯಾಂಕೇಟ್‌ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಪಂಚಾಯತ್‌ ರಾಷ್ಟ್ರಮಟ್ಟದ ಸಮೀಕ್ಷೆಗೂ ಆಯ್ಕೆಗೊಂಡಿದೆ.

ಕೇಂದ್ರಕ್ಕೆ ಶಿಫಾರಸ್ಸು
ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆ ಕಾರ್ಯಕ್ರಮದಲ್ಲಿ, ತಾಲ್ಲೂಕು ಮಟ್ಟದ ಮೌಲ್ಯಮಾಪನದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಮಟ್ಟಕ್ಕೆ ಅರ್ಹಗೊಳಿಸಿದ್ದು, ಅದರಂತೆ, ಈ ಪೈಕಿ ಪ್ರತಿ ಜಿಲ್ಲೆಯಿಂದ ಮೂರು ವರ್ಗಗಳಲ್ಲಿ ಒಟ್ಟು 269 ಗ್ರಾಮ ಪಂಚಾಯಿತಿಗಳನ್ನು SBM-G IMIS ಮೂಲಕ ರಾಜ್ಯ ಮಟ್ಟಕ್ಕೆ ಸಲ್ಲಿಸಲಾಗಿದೆ. ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ – 2023 (SSG) ಮಾರ್ಗಸೂಚಿಯಂತೆ ಜಿಲ್ಲೆಗಳಿಂದ ಆಯ್ಕೆ ಮಾಡಿದ ಗ್ರಾಮ ಪಂಚಾಯತಿಗಳ ಪೈಕಿ ಅಂಕಗಳ ಆಧಾರದ ಮೇಲೆ ಪ್ರತಿ ವರ್ಗದಲ್ಲಿ 5 ಗ್ರಾಮ ಪಂಚಾಯಿತಿಗಳಂತೆ ಒಟ್ಟು 15 ಗ್ರಾಮ ಪಂಚಾಯಿತಿಗಳನ್ನು ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ.

ಜಿಲ್ಲೆಯಿಂದ 3 ಪಂಚಾಯತ್‌
ಪ್ರಸ್ತುತ ರಾಜ್ಯ ಮಟ್ಟಕ್ಕೆ ಅರ್ಹವಾದ 15 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಕಳ ತಾಲೂಕಿನ ಸಾಣೂರು ಪಂಚಾಯತ್‌ ಒಂದಾಗಿದೆ. ಉಳಿದಂತೆ ಉಡುಪಿ ಜಿಲ್ಲೆಯಲ್ಲಿ ಉಡುಪಿ ತಾಲೂಕಿನ ಕೆಮ್ಮಣ್ಣು ಮತ್ತು ಕುಂದಾಪುರದ ತ್ರಾಸಿ ಪಂಚಾಯತ್‌ ಆಯ್ಕೆಗೊಂಡಿದೆ.





























































































































error: Content is protected !!
Scroll to Top