ಮೂಡುಬಿದಿರೆ : ಗಾಂಧಿ ಜಯಂತಿ ಪ್ರಯುಕ್ತ ಎಕ್ಸಲೆಂಟ್ ಕಾಲೇಜಿನ ರಾಜ ಸಭಾಂಗಂಣದಲ್ಲಿ ಅ. 2 ರಂದು ಬೆಳಿಗ್ಗೆ 10:30 ಕ್ಕೆ ಸರ್ವ ಧರ್ಮ ಅರಿವು ಸಮಾರಂಭ ಜರುಗಲಿದೆ. ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀವರ್ಚನ ನೀಡಲಿದ್ದಾರೆ. ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಧರ್ಮಪ್ರಾಂತ್ಯ ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ಕಾರ್ಯದರ್ಶಿ ರೆ. ಫಾದರ್ ವಿನ್ಸೆಂಟ್ ಕ್ರಾಸ್ತ, ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಹಾಗೂ ಮಂಗಳೂರು ಅಖಿಲ ಭಾರತ ಬ್ಯಾರಿ ಪರಿಷತ್ತಿನ ಅಧ್ಯಕ್ಷ ಯು. ಎಚ್. ಖಾಲಿದ್ ಧಾರ್ಮಿಕ ಉಪನ್ಯಾಸ ನೀಡಲಿರುವರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿರುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅ. 2 : ಎಕ್ಸಲೆಂಟ್ ಕಾಲೇಜಿನಲ್ಲಿ ಸರ್ವ ಧರ್ಮ ಅರಿವು ಸಮಾರಂಭ

























