ಬಿಜೆಪಿ ಮಹಿಳಾ ಮೋರ್ಚಾ ಬೆಳ್ಮಣ್ ಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ತಪಾಸಣೆ

ಕಾರ್ಕಳ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ನಡೆಯುತ್ತಿರುವ ಸೇವಾ ಪಕ್ವಾಡ್ ಕಾರ್ಯಕ್ರಮದಡಿಯಲ್ಲಿ ಮಹಿಳಾ ಮೋರ್ಚಾ ಬೆಳ್ಮಣ್ ಶಕ್ತಿ ಕೇಂದ್ರದ ನೇತೃತ್ವದಲ್ಲಿ , ಬೆಳ್ಮಣ್‌ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಸೆ.29 ರಂದು ಬೆಳ್ಮಣ್ ಪೇರಲ್ಪಾದೆ ಅಶ್ವಥಕಟ್ಟೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಕಳ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಮಹಿಳಾ ಮೋರ್ಚಾ ಬೆಳ್ಮಣ್ ಶಕ್ತಿ ಕೇಂದ್ರದ ಉಪಾಧ್ಯಕ್ಷೆ ಆಶಾ ದೇವೇಂದ್ರ ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ, ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ನಾಗವೇಣಿ, ಪಲ್ಲವಿ ಪ್ರವೀಣ್, ಸ್ಥಾನೀಯ ಸಮಿತಿ ಅಧ್ಯಕ್ಷ ದೇವೇಂದ್ರ ಶೆಟ್ಟಿ, ಗ್ರಾಮ ಪಂಚಾಯತ್ ಹಾಗೂ ಮಹಿಳಾ ಮೋರ್ಚಾದ ಸದಸ್ಯರು ಉಪಸ್ಥಿತರಿದ್ದರು.

















































error: Content is protected !!
Scroll to Top