ಮಣಿಪಾಲ – ಇನ್ಸ್ಟ್ರಗ್ರಾಂ ಪೋಸ್ಟ್ ನೋಡಿ ಬಾರ್​ಗೆ ಪೊಲೀಸರ ದಾಳಿ

ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

ಉಡುಪಿ : ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್​ಗೆ ದಾಳಿ ಮಾಡಿ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಸ್​ ಸ್ಟೇಸಿ ಬಾರ್​ನಲ್ಲಿ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಹಾಗೂ ಹುಕ್ಕಾ, ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ವೀಕೆಂಡ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ವಿಷಯ ತಿಳಿಯುತ್ತಿದ್ದಂತೆ ಮಿಂಚಿನ ಕಾರ್ಯಾಚರಣೆ ನಡೆಸಿ ಬಾರ್​ ಮೇಲೆ ದಾಳಿ ನಡೆಸಿದ್ದಾರೆ.

ಮಣಿಪಾಲ ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ‌ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್​ ಸ್ಟೇಸಿ ಬಾರ್​ ಮೇಲೆ ದಾಳಿ ನಡೆಸಿದೆ. ಈ ವೇಳೆ ಅನುಮತಿ ಇಲ್ಲದೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಬಾರ್​ನಲ್ಲಿ ಡಿಜೆ ಪಾರ್ಟಿ ಮಾಡಲು ಅನುಮತಿ ನೀಡಿದ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿ ವೀಕೆಂಡ್​ನಲ್ಲೂ ಮಣಿಪಾಲ ಪೊಲೀಸರು ಮಣಿಪಾಲದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

















































error: Content is protected !!
Scroll to Top